ಜಾತಿಗಣತಿದಾರರಿಗೆ ಸರಿಯಾದ ಮಾಹಿತಿ ನೀಡಿಮೀಸಲಾತಿ ವರ್ಗೀಕರಣಕ್ಕೆ ಬರುವ ಗಣತಿದಾರರಿಗೆ ಸಂಕ್ಷಿಪ್ತ ಮಾಹಿತಿ ನೀಡಲು ಸಫಾಯಿ ಕರ್ಮಚಾರಿ ಆಯೊಗದ ಮಾಜಿ ಎ.ಆರ್. ವೆಂಕಟೇಶ್ ಸಲಹೆ ನೀಡಿದರು. ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಒಟ್ಟು 101 ಜಾತಿಗಳಿವೆ. ಈ ಪೈಕಿ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಉಪ ಜಾತಿಗಳು ಯಾವ ಜಾತಿಗೆ ಸೇರಿವೆ ಎಂಬ ಗೊಂದಲವನ್ನೂ ಇತ್ಯರ್ಥಪಡಿಸಬೇಕಾಗಿದೆ. ದಾಖಲೆ, ಪುರಾವೆ, ಅಂತರ್ ಜಾತಿ ಹಿಂದುಳಿದಿರುವಿಕೆ ಇನ್ನಿತರ ಮಾಹಿತಿ ಸಂಗ್ರಹಿಸಿ ವೈಜ್ಞಾನಿಕ ಮತ್ತು ತರ್ಕಬದ್ಧವಾಗಿ ಎಸ್‌ಸಿ ಮೀಸಲು ವರ್ಗೀಕರಣ ನಡೆಸಬೇಕಾಗಿರುವುದರಿಂದ ಅಂಜಿಕೆ ಇಲ್ಲದೆ ಸರಿಯಾದ ಮಾಹಿತಿ ನೀಡಬೇಕು.