ಪಿಸಿಎಂಬಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷಾ ಪೂರ್ವ ತರಬೇತಿಜಿಲ್ಲೆಯಲ್ಲಿ ಸತತ ಮೂರು ವರ್ಷಗಳಿಂದಲೂ ತರಬೇತಿ ನೀಡಲಾಗುತ್ತಿದ್ದು, ಶೇ.೮೦ರಷ್ಟು ವಿದ್ಯಾರ್ಥಿಗಳು ಪ್ರತಿ ವರ್ಷ ವಿವಿಧ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರುತ್ತಾರೆ. ಫೋರಮ್ ವತಿಯಿಂದ ನೀಡಲಾಗುವ ತರಬೇತಿಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಯುಪಿಎಸ್‌ಸಿ ಪರೀಕ್ಷೆಯನ್ನೂ ಎದುರಿಸಿದ್ದು, ಓರ್ವ ವಿದ್ಯಾರ್ಥಿನಿ ರ್‍ಯಾಂಕ್ ಬಂದಿರುತ್ತಾಳೆ. ಅದೇ ರೀತಿ ಕೆಲವರು ಕೃಷಿಯಲ್ಲಿ ಹೆಚ್ಚಿನ ಆಸಕ್ತಿ ವಹಿಸಿಕೊಂಡು ಕೆಲಸ ಮಾಡಲು ಸಹ ಮುಂದಾಗಿದ್ದಾರೆ.