ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ; ಮಾಜಿ ಸಿಎಂ ಬಿಎಸ್‌ವೈ ಪ್ರಚಾರ ಮಂಡ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಮಂಜುನಾಥ್ ಹಾಗೂ ಶಿವಮೊಗ್ಗದಲ್ಲಿ ಬಿ.ವೈ. ರಾಘವೇಂದ್ರ 2.5ಲಕ್ಷ ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ. ಮಾಜಿ ಪ್ರಧಾನಿ, ಮಣ್ಣಿನ ಮಗ ಎಚ್.ಡಿ. ದೇವೇಗೌಡರು ಅಭಿವೃದ್ಧಿ ಹರಿಕಾರ ನರೇಂದ್ರ ಮೋದಿಯವರೇ ೩ನೇ ಬಾರಿ ಪ್ರಧಾನಿಯಾಗಬೇಕೆಂಬ ಅಪೇಕ್ಷೆಯೊಂದಿಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಸಮರ್ಥ ನಾಯಕ ಪ್ರಧಾನಿ ಮೋದಿಯವರಿಗಾಗಿ ಈ 92ರ ಇಳಿ ವಯಸ್ಸಿನಲ್ಲಿಯೂ ಹಗಲಿರುಳು ಪ್ರಚಾರದಲ್ಲಿ ತೊಡಗಿದ್ದಾರೆ.