ಕನಕಪುರ ಮಣ್ಣಲ್ಲೇ ನಮ್ಮ ಬದುಕು, ಅಂತ್ಯ ಸಂಸ್ಕಾರಕನಕಪುರ: ಐದು ವರ್ಷಕ್ಕೊಮ್ಮೆ ದೇವೇಗೌಡ ಮತ್ತು ಕುಮಾರಸ್ವಾಮಿಯವರು ಕನಕಪುರದಲ್ಲಿ ಪ್ರವಾಸ ಮಾಡಿ ಹೋಗ್ತಾರೆ. ಅವರು ಎಷ್ಟು ಸಾರಿ ಬೇಕಾದರು ಬಂದು ಹೋಗಲಿ ನನ್ನದೇನು ಅಭ್ಯಂತರವಿಲ್ಲ. ನಾವು ಮಾತ್ರ ಅವರಂತಲ್ಲ. ಈ ತಾಲೂಕಿನ ಜನರ ಮಕ್ಕಳಾಗಿರುವ ನಮ್ಮ ಬದುಕು, ಜೀವನ, ಪಲ್ಲಕ್ಕಿ, ಕೊನೆಗೆ ಹೆಣ ಎಲ್ಲವೂ ಇದೇ ಮಣ್ಣಿನಲ್ಲಿ ಅಡಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.