• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ ಕದಿಯಲಾಗದ ಆಸ್ತಿ, ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ: ನಾಗೇಂದ್ರ
ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಆಶಯಗಳು ಇಂದಿಗೂ ಸಮರ್ಥವಾಗಿ ಜಾರಿಯಲಿಲ್ಲ. ಆದಿ ಜಾಂಬವ ಮಾದಿಗರ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವ ಜನರಿಗೆ ಮೀಸಲಾತಿಯ ಪ್ರಯೋಜನ ಹಾಗೂ ಒಳ ಮೀಸಲಾತಿಯು ಸಮರ್ಪಕವಾಗಿ ಜಾರಿಯಾಗಿಲ್ಲ.
ವಿಶ್ವಕರ್ಮರ ದಾರಿದೀಪದಲ್ಲಿ ನಡೆಯೋಣ
ದೇವಾನು ದೇವತೆಗಳಿಗೆ ಆಯುಧ, ರಥಗಳನ್ನು ಮಾಡಿಕೊಟ್ಟವರು ವಿಶ್ವಕರ್ಮ ಸಮಾಜದವರು ಇಂದು ಅವರು ಹಾಕಿಕೊಟ್ಟಿರುವ ದಾರಿದೀಪದಲ್ಲಿ ನಾವೆಲ್ಲರೂ ನಡೆಯೋಣ ಎಂದು ಸಂಸದರಾದ ಶ್ರೇಯಸ್ ಎಂ ಪಟೇಲ್ ಅವರು ತಿಳಿಸಿದ್ದಾರೆ. ವಿಶ್ವಕರ್ಮ ಮಾಡುವವರನ್ನು ನಾವು ಪ್ರಪಂಚದ ಶ್ರೇಷ್ಠ ದೇವರಿಗೆ ಹೋಲಿಸುವಂತಹ ಕೆಲಸ ಮಾಡಬೇಕು. ಕೇವಲ ಒಂದು ಸಮಾಜಕ್ಕೆ ಅಲ್ಲ ಇಡೀ ಪ್ರಪಂಚಕ್ಕೆ ತಿಳಿಹೇಳುವ, ಸಮಾಜದ ಏಳಿಗಾಗಿ ಶ್ರಮಿಸುವಂತಹ ಕೆಲಸವನ್ನು ನಾವೆಲ್ಲರೂ ಮಾಡಬೇಕು ಎಂದರು.
ಅನಿಕೇತನ ಲಯನ್ಸ್ ಕ್ಲಬ್ ನಿಂದ ವಾಟರ್ ಕ್ಯಾನ್ ವಿತರಣೆ
ಪ್ರಧಾನಿ ಮೋದಿ ಅವರು ದೇಶಕ್ಕಾಗಿ ಹೆಚ್ಚು ಸೇವೆ ಸಲ್ಲಿಸುತ್ತಿದ್ದಾರೆ. ಬಡವರ ಏಳ್ಗೆ ಹಾಗೂ ದೇಶದ ಅಭಿವೃದ್ಧಿಗೆ ಪಣತೊಟ್ಟು ನಿಂತಿದ್ದಾರೆ. ಅವರ ಆರೋಗ್ಯ ಚೆನ್ನಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಇನ್ನೂ ಹೆಚ್ಚಿನ ದೇಶ ಸೇವೆ ಮಾಡಲು ದೇವರು ಶಕ್ತಿ ನೀಡಲಿ ಎಂದು ಕೇಳಿಕೊಳ್ಳುತ್ತೇನೆ.
ಪೋಷಣ್ ಸಪ್ತಾಹದಲ್ಲಿ ಗರ್ಭಿಣಿಯರಿಗೆ ಸೀಮಂತ ಶಾಸ್ತ್ರ
ಮಕ್ಕಳ ಆರೋಗ್ಯದ ಬಗ್ಗೆ ಅರಿವು ಮೂಡಿಸಿಕೊಂಡು ಪೋಷಕಾಂಶ ಹೊಂದಿರುವ ಆಹಾರ ಪೂರೈಕೆ ಮಾಡಬೇಕು, ಹಣ್ಣು, ತರಕಾರಿ, ಹಸಿರು ಸೊಪ್ಪು, ಮೊಳಕೆ ಕಟ್ಟಿದ ಕಾಳುಗಳು ನೀಡಬೇಕು. ಆರೋಗ್ಯದ ದೃಷ್ಟಿಯಿಂದ ವ್ಯಾಯಾಮ, ವಾಕಿಂಗ್ ಮಾಡುವ ಮೂಲಕ ಜೀವನ ಪದ್ಧತಿ ಬದಲಾಯಿಸಿಕೊಳ್ಳಬೇಕು.
ಬನ್ನಂಗಾಡಿ ಕಾಲೇಜಿನಲ್ಲಿ ವಿಶ್ವಕರ್ಮ ಜಯಂತಿ ಅರ್ಥಪೂರ್ಣ ಆಚರಣೆ
ರೈತರು ಕೃಷಿ ಚಟುವಟಿಕೆ ನಡೆಸಲು ಬೇಕಿರುವ ಸಾಮಗ್ರಿಗಳು, ಮನೆ ನಿರ್ಮಾಣ, ಚಿನ್ನಾಭರಣ ಸೇರಿದಂತೆ ಸಮಾಜದಲ್ಲಿ ನಡೆಯುವ ಪ್ರತಿಯೊಂದು ಅಭಿವೃದ್ಧಿ ಕೆಲಸಕ್ಕೂ ಅವರ ಸಹಕಾರ ಅಗತ್ಯವಾಗಿದೆ. ಸರ್ಕಾರ ಇಂತಹ ಮಹಾನ್ ವ್ಯಕ್ತಿಗಳ ಜಯಂತ್ಯುತ್ಸವನ್ನು ಆಚರಣೆ ಮಾಡುವ ಮೂಲಕ ವಿಶ್ವಕರ್ಮ ಸಮುದಾಯದ ಗೌರವ ಘನತೆ ಹೆಚ್ಚಿಸುವ ಕೆಲಸ ಮಾಡುತ್ತಿದೆ.
ಪ್ರಧಾನಿ ಮೋದಿ ಹುಟ್ಟುಹಬ್ಬದಂಗವಾಗಿ ಪೆಂಡಾಲ್‌ ಗಣಪನಿಗೆ ವಿಶೇಷ ಪೂಜೆ
ಮೋದಿ ಹುಟ್ಟುಹಬ್ಬ ಪೆಂಡಾಲ್ ಗಣಪನಿಗೆ ವಿಶೇಷ ಪೂಜೆ ಮಾಜಿ ಶಾಸಕ ಪ್ರೀತಮ್ ಗೌಡ ಹಾಗೂ ಮೋದಿ ಅಭಿಮಾನಿಗಳಿಂದ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಸೇರಿ ವಿಘ್ನ ನಿವಾರಕನಲ್ಲಿ ಪ್ರಾರ್ಥನೆ ಮಾಡಲಾಗಿದೆ ಎಂದರು. ಎಲ್ಲರೂ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮೋದಿ ಅವರ ೭೫ನೇ ಹುಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ ಎಂದರು. ಎಲ್ಲರೂ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮೋದಿ ಅವರ ೭೫ನೇ ಹುಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ ಎಂದರು.
ಹಾಸನ ಮಹಾನಗರ ಪಾಲಿಕೆಗೆ ಗಿರೀಶ್‌ ಚನ್ನವೀರಪ್ಪ ಹೊಸ ಮೇಯರ್
ಜೆಡಿಎಸ್‌ನೊಳಗಿನ ಭಾರೀ ಹಗ್ಗಜಗ್ಗಾಟದ ನಂತರ ಬುಧವಾರ ಹಾಸನ ಮಹಾನಗರ ಪಾಲಿಕೆಯ ನೂತನ ಮೇಯರ್‌ ಆಗಿ 8ನೇ ವಾರ್ಡ್‌ನ ಗಿರೀಶ್‌ ಚನ್ನವೀರಪ್ಪ ಮೇಯರ್‌ ಆಗಿ ಅವಿರೋಧವಾಗಿ ಆಯ್ಕೆಯಾದರು. ಬುಧವಾರ ನಡೆದ ಚುನಾವಣೆಯಲ್ಲಿ ಗಿರೀಶ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಮಧ್ಯಾಹ್ನದ ನಂತರ ಚುನಾವಣಾಧಿಕಾರಿಗಳಾದ ಮೈಸೂರು ಪ್ರಭಾರಿ ಪ್ರಾದೇಶಿಕ ಆಯುಕ್ತ ವೆಂಕಟರಾಜ ಅವರು ಗಿರೀಶ್‌ ಅವರ ಆಯ್ಕೆ ಘೋಷಿಸಿದರು. ಬಿಜೆಪಿ ಇತರರ ಬೆಂಬಲ ಪಡೆದು ಸ್ಪರ್ಧಾ ಅಖಾಡಕ್ಕಿಳಿಯಬಹುದೆಂದು ನಿರೀಕ್ಷಿಸಿದ್ದರೂ, ಕೊನೆಯಲ್ಲಿ ತಟಸ್ಥವಾಯಿತು.
ಕಾಫಿ ತೋಟಗಳಲ್ಲಿ ಕಾಡಾನೆಗಳ ದಾಂಧಲೆ
ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದಲ್ಲದೆ ಅಪಾರ ಪ್ರಮಾಣದ ಬೆಳೆ ಹಾನಿಯಿಂದ ಲಕ್ಷಾಂತರ ರುಪಾಯಿ ನಷ್ಟ ಅನುಭವಿಸುತ್ತಿದ್ದರು ಇಲಾಖೆಯು ಕೆಲವೇ ಸಾವಿರಾರು ರುಪಾಯಿಗಳ ಪರಿಹಾರ ನೀಡುತ್ತಾ ಕೃಷಿಕರ ಬದುಕನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸುತ್ತಿದ್ದಾರೆ ಎಂದು ಬೆಳ್ಳಾವರ ಗ್ರಾಮದ ಕೃಷಿಕರಾದ ವಿಶ್ವನಾಥ್ ನಾಯಕ್ ಬೇಸರ ವ್ಯಕ್ತಪಡಿಸಿದ್ದಾರೆ. ಅರೇಹಳ್ಳಿ ಭಾಗದ ಸುತ್ತಮುತ್ತಲಿನಲ್ಲಿ ಕಾಡಾನೆಗಳ ಹಾವಳಿ ವಿಪರೀತವಾಗುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಹಲವು ಬೆಳೆಗಾರರು ಸೋಲಾರ್‌ ತಂತಿ ಬೇಲಿಯನ್ನು ಅಳವಡಿಸುವತ್ತ ಮೊರೆ ಹೋಗಿದ್ದಾರೆ.
ಯತ್ನಾಳ್‌ ಹೇಳಿಕೆ ಖಂಡಿಸಿ ಭೀಮ್ ಆರ್ಮಿ ಸಂಘಟನೆ ಪ್ರತಿಭಟನೆ
ಭೀಮ್ ಆರ್ಮಿ ಚನ್ನರಾಯಪಟ್ಟಣ ತಾಲೂಕು ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಮಾಧ್ಯಮದೊಂದಿಗೆ ಮಾತನಾಡಿ, ದಸರಾ ಉದ್ಘಾಟನೆಯ ಸಂದರ್ಭದಲ್ಲಿ ಮುಸ್ಲಿಂ ಮಹಿಳೆಗೂ ದಲಿತ ಮಹಿಳೆಗೂ ಉದ್ಘಾಟನೆ ಮಾಡುವ ಅರ್ಹತೆ ಇಲ್ಲ. ಕೇವಲ ಸನಾತನ ಧರ್ಮದ ಮಹಿಳೆಯರು ಮಾತ್ರ ಅರ್ಹರು ಎಂದು ಸಾರ್ವಜನಿಕವಾಗಿ ಮಾಧ್ಯಮದ ಮೂಲಕ ಹೇಳಿಕೆ ನೀಡಿದ್ದಾರೆ. ಇಂತಹ ಹೇಳಿಕೆಗಳು ಮುಸ್ಲಿಂ ಹಾಗೂ ದಲಿತ ಮಹಿಳೆಯರ ಗೌರವವನ್ನು ಹಾಳು ಮಾಡುತ್ತವೆ. ಜಾತಿ ಮತ್ತು ಧಾರ್ಮಿಕ ಭೇದಭಾವವನ್ನು ಪ್ರೋತ್ಸಾಹಿಸುತ್ತವೆ. ಇದು ಸಂವಿಧಾನದ ಜಾತ್ಯತೀತ ಮತ್ತು ಸಮಾನತೆಯ ತತ್ವಗಳಿಗೆ ವಿರುದ್ಧವಾಗಿದೆ ಎಂದು ದೂರಿದರು.
ಗಾಂಜಾ ಸಹಿತ ಓರ್ವನ ಬಂಧನ
ಹೊರವಲಯದ ಆನೆಮಹಲ್ ಗ್ರಾಮದ ಬಡಾವಣೆಯೊಂದರಲ್ಲಿ ಹಸೈನಾರ್ ಆಲಿಯಾಸ್ ಹ್ಯಾರೀಸ್ ಸಹಚರರು ಕಾರೊಂದರಲ್ಲಿ ಬಂದು ಗಾಂಜಾ ಸೊಪ್ಪನ್ನು ಮಾರಾಟ ಮಾಡುವಾಗ ಪ್ರಜ್ವಲ್ ಎಂಬುವನನ್ನು ಪೊಲೀಸರು ಬಂಧಿಸಿದ್ದು , ಹಸೈನಾರ್, ಶೋಯಬ್ ಪರಾರಿಯಾಗಿರುತ್ತಾರೆ. ಆರೋಪಿಗಳು ಕಾರಿನಲ್ಲಿ ಬಂದು ಗಾಂಜಾ ಸೊಪ್ಪನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಸಕಲೇಶಪುರ ನಗರ ಠಾಣೆಯ ಇನ್ಸ್‌ಪೆಕ್ಟರ್‌ ಎಂ.ಜಗದೀಶ್ ಅವರ ತಂಡ ದಾಳಿ ಮಾಡಿ ಸುಮಾರು ೭೫೦ ಗ್ರಾಂ ಗಾಂಜಾವನ್ನು ವಶಪಡಿಸಿ ಒಬ್ಬ ಆರೋಪಿಯನ್ನು ಬಂಧಿಸಿರುತ್ತಾರೆ.
  • < previous
  • 1
  • ...
  • 1135
  • 1136
  • 1137
  • 1138
  • 1139
  • 1140
  • 1141
  • 1142
  • 1143
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved