ಸಾಗುವಳಿ ಭೂಮಿ ಮಂಜೂರಾತಿಗೆ ರೈತರ ಆಗ್ರಹತಾಲೂಕಿನಲ್ಲಿ ಸರ್ಕಾರಿ, ಗೋಮಾಳ, ಹುಲ್ಲುಬನ್ನಿ, ಅರಣ್ಯ ಇನ್ನಿತರೆ ಭೂಮಿಗಳಲ್ಲಿ ಸಾಗುವಳಿ ಮಾಡುತ್ತಾ ಅರ್ಜಿ ಸಲ್ಲಿಸಿರುವ ಎಲ್ಲರಿಗೂ ಭೂಮಿ ಮಂಜೂರಾತಿ ನೀಡಬೇಕೆಂದು ಆಗ್ರಹಿಸಿ ದಿನಾಂಕ- 27-10-2025 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಬಗರ್ ಹುಕುಂ ಸಾಗುವಳಿದಾರರ ಮೆರವಣಿಗೆಯು ನಗರದ ಸರ್ಕಾರಿ ಆಸ್ಪತ್ರೆಯ ಬಳಿಯ ಅಂಬೇಡ್ಕರ್ ಪ್ರತಿಮೆಯಿಂದ ತಹಸೀಲ್ದಾರ್ ಕಚೇರಿವರೆಗೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹಾಗೂ ಕರ್ನಾಟಕ ರಾಜ್ಯ ರೈತ ಸಂಘಟನೆ ನೇತೃತ್ವದಲ್ಲಿ ನಡೆಯಲಿದೆ ಎಂದು ಎರಡೂ ಸಂಘಟನೆಗಳ ಪದಾಧಿಕಾರಿಗಳು ತಿಳಿಸಿದರು.