ಗ್ಯಾರಂಟಿ ವಿರೋಧಿಸುವ ಮೂಲಕ ಜನರಿಗೆ ಅವಮಾನಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಯಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಗ್ಯಾರಂಟಿ ಕುರಿತು ವ್ಯತಿರಿಕ್ತ ಹೇಳಿಕೆ ಕೊಡುತ್ತಿದ್ದಾರೆ. ಆದರೆ, ವಾಸ್ತವದಲ್ಲಿ ಪ್ರತಿನಿತ್ಯ 35 ಲಕ್ಷ ಮಹಿಳೆಯರು ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸುವ ಮೂಲಕ ಶಕ್ತಿ ಯೋಜನೆಯ ಫಲಾನುಭವಿಗಳಾಗಿದ್ದಾರೆ.