ವಿನಯಕುಮಾರ್ ಮತ್ತೊಮ್ಮೆ ನಾಮಪತ್ರದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ್ ಶುಕ್ರವಾರ ಮತ್ತೊಂದು ನಾಮಪತ್ರ ಸಲ್ಲಿಸಿದರು. ಏಪ್ರಿಲ್ 17ರಂದು ರೋಡ್ ಶೋ ನಡೆಸಿ ಅದ್ಧೂರಿಯಾಗಿ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿಯೂ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದ್ದರು. ಈಗ ಮೂರನೇ ಬಾರಿಗೆ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.