ದೇಶದ ಭವಿಷ್ಯ ಉಜ್ವಲಕ್ಕಾಗಿ ಪೋಷಣ್ ಅಭಿಯಾನಸದೃಢ ಸಮಾಜ, ದೇಶದ ಭವಿಷ್ಯವನ್ನು ಉಜ್ವಲಗೊಳಿಸುವ ಸಲುವಾಗಿ ಪೋಷಣ್ ಅಭಿಯಾನ ಕಾರ್ಯಕ್ರಮ ಜಾರಿಗೆ ತರಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಕಾರದೊಂದಿಗೆ ಮಕ್ಕಳಿಗೆ ಪೌಷ್ಟಿಕಾಂಶ ನೀಡುವ ಮೂಲಕ ದೇಶದ ಭವಿಷ್ಯಕ್ಕೆ ಭದ್ರ ಬುನಾದಿ ಹಾಕೋಣ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದರು.