ಕಾರ್ಯಪಾಲಕ ಎಂಜಿನಿಯರ್ ಜಯಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿಹಾಸನ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಭ್ರಷ್ಠ ಅಧಿಕಾರಿಗಳ ಮನೆ ಹಾಗೂ ಪತ್ನಿ ನಿವಾಸ, ಹಾರ್ಡ್ವೇರ್ ಅಂಗಡಿ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದಲ್ಲದೇ ಮಹತ್ವದ ದಾಖಲೆ ವಶಪಡಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಮಾಡಿರುವ ಬಗ್ಗೆ ಅನೇಕ ದೂರುಗಳು ಬಂದ ಹಿನ್ನಲೆಯಲ್ಲಿ ಹೊಸ ಬಸ್ ನಿಲ್ದಾಣದ ಎದುರು ಹೌಸಿಂಗ್ ಬೋರ್ಡ್ ನಲ್ಲಿರುವ ರಾಷ್ಟ್ರೀಯ ಹೆದ್ದಾರಿ ಇಲಾಖೆ, ಹಾಸನ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಜಯಣ್ಣ ಎಂಬುವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸಿದರು.