ಆಡಳಿತ ವ್ಯವಸ್ಥೆಗೆ ಆಧುನಿಕ ಸ್ಪರ್ಶ ನೀಡಿದ ಅಂಬೇಡ್ಕರ್: ಶಿಲ್ಪಾನಾಗ್ಸಂವಿಧಾನದ ಮೂಲಕ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ವ್ಯವಸ್ಥೆಯನ್ನು ಹುಟ್ಟುಹಾಕಿ ದೇಶದ ಆಡಳಿತ ವ್ಯವಸ್ಥೆಗೆ ಆಧುನಿಕ ಸ್ಪರ್ಶ ನೀಡಿದ ಸಮಾನತೆಯ ಹರಿಕಾರ, ಸಮಾಜ ಸುಧಾರಕ ಡಾ. ಬಿ.ಆರ್. ಅಂಬೇಡ್ಕರ್ ಅವರು ಮಹಾನ್ ಮಾನವತಾವಾದಿಯೂ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಭಿಪ್ರಾಯಪಟ್ಟರು.