ಸಂಸದೆಯಾದರೆ ಎಲ್ಲ ಗ್ರಾಮಗಳ ಸಮಸ್ಯೆಗಳಿಗೆ ಪರಿಹಾರಗೆದ್ದ ತಕ್ಷಣ ಮನೆಯಲ್ಲಿ ಕೂರದೇ ಪ್ರತಿ ಗ್ರಾಮಗಳ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು, ಸರ್ಕಾರದ ಹಂತದಲ್ಲಿ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈಗಲೂ ನಮ್ಮ ಕುಟುಂಬ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಜಿಲ್ಲೆ ಅಭಿವೃದ್ಧಿಯಲ್ಲಿ ನಾಗಾಲೋಟದಲ್ಲಿ ಹೋಗುವಂತೆ ನೋಡಿಕೊಳ್ಳುತ್ತೇನೆ. ಜನಸೇವೆಗೆ ಅವಕಾಶ ಕೊಡಿ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಚನ್ನಗಿರಿಯಲ್ಲಿ ಹೇಳಿದ್ದಾರೆ.