ಇಫ್ತಿಯಾರ್ ಕೂಟದಲ್ಲಿ ಡಾ.ಎಸ್ಸೆಸ್, ಎಸ್ಸೆಸ್ಸೆಂ ಭಾಗಿಹಳೇ ದಾವಣಗೆರೆಯ ಬಾಷಾ ನಗರದಲ್ಲಿನ ಕಾಂಗ್ರೆಸ್ ಹಿರಿಯ ಮುಖಂಡ ಜನಾಬ್ ಸೈಯದ್ ಸೈಫುಲ್ಲಾ ಸಾಬ್ ನಿವಾಸದಲ್ಲಿ ಸೌಹಾರ್ದತೆಯ ಇಫ್ತಿಯಾರ್ ಕೂಟ ನಡೆಯಿತು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರಾಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ನಾಯಕ, ಶಾಸಕ ಶಾಮನೂರು ಶಿವಶಂಕರಪ್ಪ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಆತಿಥ್ಯವನ್ನು ಸ್ವೀಕರಿಸಿದರು.