ಜಾತಿ ಮುಂದೆ ಕ್ರಿಶ್ಚಿಯನ್ ಬಳಕೆಗೆ ವಿರೋಧಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಹಿಂದೂ ಜಾತಿಗಳೊಂದಿಗೆ ‘ಕ್ರಿಶ್ಚಿಯನ್’ ಎಂದು ನಮೂದಿಸಿರುವುದನ್ನು ಹಿಂಪಡೆಯಬೇಕು ಹಾಗೂ ಹಿಂದೂ ಧರ್ಮದಿಂದ ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿರುವವರಿಗೆ ಮೀಸಲಾತಿ ಸೌಲಭ್ಯ ದೊರೆಯುವುದಿಲ್ಲ ಎಂದು ಮುಖ್ಯಮಂತ್ರಿಗಳು ಬಹಿರಂಗವಾಗಿ ಘೋಷಿಸಬೇಕು ಎಂದು ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆ-ಕರ್ನಾಟಕ ವತಿಯಿಂದ ಆಯೋಜಿಸಿದ್ದ ದುಂಡು ಮೇಜಿನ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.