ಅನಿರೀಕ್ಷಿತ ದಾಳಿ ನಡೆಸಿ ಅಕ್ರಮ ಮದ್ಯ ಸಾಗಣೆ ತಪಾಸಣೆ ನಡೆಸಿ-ಜಿಲ್ಲಾಧಿಕಾರಿತಂಡಗಳನ್ನು ರಚಿಸಿಕೊಂಡು ಅನಿರೀಕ್ಷಿತ ದಾಳಿ ಮೂಲಕ ಅಕ್ರಮ ಮದ್ಯ ಮಾರಾಟ ಮತ್ತು ಸಂಗ್ರಹಣೆ ಪ್ರಕರಣಗಳ ಪತ್ತೆಮಾಡಿ, ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಬೇಕು. ಹೆದ್ದಾರಿಗಳಲ್ಲಿ ಲೈಸೆನ್ಸ್ ಇಲ್ಲದೇ ಅಕ್ರಮವಾಗಿ ಮದ್ಯ ಸಾಗಾಣಿಕೆ ಕುರಿತು ತೀವ್ರ ತಪಾಸಣೆ ನಡೆಸಿ ಪ್ರಕರಣ ದಾಖಲಿಸಬೇಕು ಎಂದು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.