• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಚ್‌ಪಿವಿ ಲಸಿಕೆಯಿಂದ ಗರ್ಭಕೊರಳ ಕ್ಯಾನ್ಸರ್‌ ತಡೆಗಟ್ಟಬಹುದು
9 ರಿಂದ 25 ವಯೋಮಿತಿಯೊಳಗಿನ ಬಾಲಕಿಯರು, ಯುವತಿಯರು, ಮಹಿಳೆಯರು ಎಚ್‌ಪಿವಿ ಲಸಿಕೆಯನ್ನು ಪಡೆಯುವುದರಿಂದ ಗರ್ಭಕೊರಳಿನ ಕ್ಯಾನ್ಸರನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು ಎಂದು ಪ್ರಸೂತಿ ಸ್ತ್ರೀರೋಗ ತಜ್ಞರ ಸಂಘದ ಅಧ್ಯಕ್ಷರಾದ ಡಾ. ಪ್ರೇಮಲತಾ ತಿಳಿಸಿದರು. ಶೇ. ೫೦ಕ್ಕೂ ಮೀರಿ ಮಹಿಳೆಯರು ಮರಣ ಹೊಂದುತ್ತಿದ್ದಾರೆ. ೩೦ ವರ್ಷ ಮೇಲ್ಪಟ್ಟ ಮದುವೆಯಾದ ಮಹಿಳೆಯರು ಕಡ್ಡಾಯವಾಗಿ ಸ್ತ್ರೀರೋಗ ತಜ್ಞರಿಂದ ತಪಾಸಣೆ ಮಾಡಿಸಿಕೊಳ್ಳಬೇಕು. ೯- ೧೪ ವಯಸ್ಸಿನ ಮಕ್ಕಳು ಲಸಿಕೆ ಪಡೆದರೆ ಶೇ. ೧೦೦ ರಷ್ಟು ಕ್ಯಾನ್ಸರ್ ರಹಿತ ಜೀವನ ಸಾಗಿಸಬಹುದು ಎಂದರು.
ಮಲಸಾವರ ಗ್ರಾಮದಲ್ಲಿ ಆನೆ ಹಾವಳಿ
ಮಲೆನಾಡು ಭಾಗದ ಅರೇಹಳ್ಳಿ ಹೋಬಳಿ ವ್ಯಾಪ್ತಿಯ ಮಲಸಾವರ ಗ್ರಾಮದಲ್ಲಿ ಕಳೆದ ರಾತ್ರಿ ಆನೆಗಳ ಹಿಂಡೊಂದು ನುಗ್ಗಿ ಓಡಾಡಿದ ಘಟನೆ ನಡೆದಿದ್ದು ಜನರ ಆತಂಕಕ್ಕೆ ಕಾರಣವಾಗಿದೆ. ಗ್ರಾಮಾಂತರ ಪ್ರದೇಶಕ್ಕೆ ಬಂದ ಆನೆಗಳು ಹೊಲ ಜಮೀನು ಹಾಗೂ ತೋಟಗಳ ದಾರಿ ಹಿಡಿದ ಪರಿಣಾಮ ಭಯದಿಂದ ಗ್ರಾಮಸ್ಥರು ಮನೆಬಾಗಿಲು ಬೀಗ ಹಾಕಿಕೊಂಡು ನಿದ್ದೆಯಿಲ್ಲದ ರಾತ್ರಿ ಕಳೆಯಬೇಕಾಯಿತು. ಪ್ರತಿ ರಾತ್ರಿ ಆನೆಗಳ ಚಲನವಲನ ಹೆಚ್ಚುತ್ತಿದೆ. ಹೊಲದಲ್ಲಿ ಬೆಳೆದಿರುವ ಬೆಳೆಗಳು ನಾಶವಾಗುವ ಪರಿಸ್ಥಿತಿ ಬಂದಿದೆ. ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಆನೆಗಳನ್ನು ಹಿಮ್ಮೆಟ್ಟಿಸದಿದ್ದರೆ ಗ್ರಾಮಸ್ಥರಿಗೆ ಬದುಕು ಕಷ್ಟವಾಗುತ್ತದೆ ಎಂದು ಸ್ಥಳೀಯ ರೈತರು ಆಕ್ರೋಶ ವ್ಯಕ್ತಪಡಿಸಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಆಯ್ಕೆ
ಅರಕಲಗೂಡು ತಾಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಅಲ್ಲಾಪಟ್ಟಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಸ್.ಪಿ.ಮಲ್ಲಿಕಾರ್ಜುನ ಅವರು ಸರ್ವಾನುಮತದಿಂದ ಆಯ್ಕೆಗೊಂಡರು. ಸಭೆಯಲ್ಲಿ ನಿರ್ದೇಶಕರಾದ ಸರಸ್ವತಿ, ಮಂಜೇಗೌಡ, ನಾಗಮ್ಮ, ಸುಮಿತ್ರಾ, ಮಮತಾ ಮುಂತಾದವರು ಹಾಜರಿದ್ದರು. ನನಗೆ ಕಡಿಮೆ ಅವಧಿಯ ಅಧ್ಯಕ್ಷ ಹುದ್ದೆ ದೊರೆತಿರಬಹುದು. ತಾಲೂಕಿನ ಶಿಕ್ಷಕರ ಸಮಸ್ಯೆ ನಿವಾರಣೆ ಮತ್ತು ಆಗಬೇಕಿರುವ ಕಾರ್ಯಗಳನ್ನು ನಿರ್ವಹಿಸಲಾಗುವುದು. ಎಲ್ಲಾ ನಿರ್ದೇಶಕರು, ಶಿಕ್ಷಕರ ಸಹಕಾರ ಪಡೆಯಲಾಗುವುದು ಎಂದು ನೂತನ ಅಧ್ಯಕ್ಷ ಮಲ್ಲಿಕಾರ್ಜುನ್ ತಿಳಿಸಿದರು.
ವೈದ್ಯಕೀಯ ಅರೆ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಅವಶ್ಯವಿದೆ
ಪ್ರಸ್ತುತ ಕಾಲಘಟ್ಟದಲ್ಲಿ ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಅತ್ಯಂತ ಅಗತ್ಯವಾಗಿ ಬೇಕಾಗಿದೆ. ಇಂತಹ ಸೂಕ್ತವಾದ ಸಂದರ್ಭದಲ್ಲಿ ಸ್ವಾಮೀಜಿಯವರು ತಮ್ಮ ದೂರದೃಷ್ಟಿಯಿಂದ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜು ಆರಂಭಿಸಿರುವುದು ಶ್ಲಾಘನೀಯವಾದುದು ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದರು. ನಮ್ಮ ರಾಜ್ಯದಲ್ಲಿ ಕ್ಯಾನ್ಸರ್ ಕಾಯಿಲೆ ಬಹುಬೇಗ ಹರಡುತ್ತಿರುವ ರೋಗವಾಗಿದ್ದು, ಇದಕ್ಕೆ ನಮ್ಮ ಆಹಾರ ಪದ್ಧತಿಯೇ ಬಹುಮುಖ್ಯ ಕಾರಣವಾಗಿದೆ. ಇದು ಹೀಗೆ ಮುಂದುವರಿದರೆ ತಾಲೂಕಿಗೆ ಒಂದು ಕ್ಯಾನ್ಸರ್ ಆಸ್ಪತ್ರೆ ತೆರೆಯಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ವಿದ್ಯಾವಂತರಲ್ಲೇ ಆತ್ಮಹತ್ಯೆ ಹೆಚ್ಚಾಗುತ್ತಿದೆ
ನಮ್ಮ ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ದಿನೇ ದಿನೇ ಹೆಚ್ಚುತ್ತಿದೆ ಹಾಗೂ ಅದರಲ್ಲೂ ವಿದ್ಯಾವಂತರಲ್ಲೇ ಆತ್ಮಹತ್ಯೆ ಹೆಚ್ಚಾಗುತ್ತಿದೆ. ದಡ್ಡರು ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ ಎಂದು ಆದಿಚುಂಚನಗಿರಿ ಕಾಲೇಜಿನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮನಃಶಾಸ್ತ್ರಜ್ಞ ಪ್ರೊ. ಡಾ. ವಿಜಯಕುಮಾರ್ ತಿಳಿಸಿದರು. ಕೀಳರಿಮೆ ಮತ್ತು ನಿರುತ್ಸಾಹ, ನಕಾರಾತ್ಮಕ ಯೋಚನೆಗಳು ಮಾನಸಿಕ ಅನಾರೋಗ್ಯ ಎಂದು ಗುರುತಿಸುತ್ತಿಲ್ಲ. ಮಾನಸಿನ ಕಾಯಿಲೆಗಳಿಗೂ ಚಿಕಿತ್ಸೆ ಇದ್ದು ಚಿಕಿತ್ಸೆ ಪಡೆದುಕೊಂಡರೆ ಆತ್ಮಹತ್ಯೆಯ ಪ್ರಕರಣಗಳನ್ನು ಕಡಿಮೆ ಮಾಡಬಹುದು ಎಂದು ಅಭಿಪ್ರಾಯಪಟ್ಟರು.
ಮೊಸಳೆ ಹೊಸಳ್ಳಿ ದುರಂತಕ್ಕೆ ಅಭಿನವ ಚಾರುಕೀರ್ತಿ ಭಟ್ಟಾಕರ ಸ್ವಾಮೀಜಿ ಸಂತಾಪ
ಹಾಸನದ ಮೊಸಳೆಹೊಸಳ್ಳಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತಕ್ಕೆ ಶ್ರೀಕ್ಷೇತ್ರ ಶ್ರವಣಬೆಳಗೊಳ ಶ್ರೀ ದಿಗಂಬರ ಜೈನ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ. ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದ 9 ಜನ ಮೃತಪಟ್ಟ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ. ಇದೊಂದು ಹೃದಯ ವಿದ್ರಾವಕ ಘಟನೆ ಎಂದಿದ್ದಾರೆ.
ಮುಸ್ಲಿಂ ಬಾಂಧವರಿಂದ ಗಣಪತಿಗೆ ವಿಶೇಷ ಪೂಜೆ
ನೃಪತುಂಗ ವೃತ್ತದಲ್ಲಿ ಶ್ರೀ ವಿನಾಯಕ ಸೇವಾ ಸಮಿತಿಯ 56ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಸೋಮವಾರ ಸಂಜೆ ಪಟ್ಟಣದ ಮುಸ್ಲಿಂ ಬಾಂಧವರು ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿನಿಯೋಗ ಮಾಡಿ ಭಾವೈಕ್ಯತೆ ಮೆರೆದರು.
136 ಟವರ್‌ ನಿರ್ಮಾಣ ಕಾರ್ಯದ ಪಟ್ಟಿ ಅಂತಿಮ: ಸಂಸದ ಬಿ.ವೈ.ರಾಘವೇಂದ್ರ
ಜಿಲ್ಲೆಯಲ್ಲಿ 4 ಶ್ರೇಣಿಯೊಳಗಿನ 287 ಟವರ್‌ಗಳ ನಿರ್ಮಾಣದ ಪೈಕಿ 136 ಟವರ್‌ಗಳ ನಿರ್ಮಾಣ ಕಾರ್ಯದ ಪಟ್ಟಿ ಅಂತಿಮವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ನರೇಗಾ ಅನುಷ್ಟಾನದಲ್ಲಿನ ಲೋಪ ಸರಿಪಡಿಸಿ: ಸಂಸದ ಬಿ.ವೈ.ರಾಘವೇಂದ್ರ
ಜಿಲ್ಲೆಯಲ್ಲಿ ನರೇಗಾ ಯೋಜನೆ ಅನುಷ್ಟಾನದಲ್ಲಿ ಅನೇಕ ಲೋಪಗಳಿದ್ದು, ಅವುಗಳನ್ನು ಸರಿಪಡಿಸುವಲ್ಲಿ ವಿಶೇಷ ಗಮನಹರಿಸುವ ಜೊತೆಗೆ ಸರ್ಕಾರಕ್ಕೆ ಸಭೆಯ ನಡಾವಳಿಯನ್ನು ಸಲ್ಲಿಸುವಂತೆ ಜಿಪಂ ಸಿಇಒಗೆ ಸಂಸದ ಬಿ.ವೈ.ರಾಘವೇಂದ್ರ ತಾಕೀತು ಮಾಡಿದರು.
ಹಿಂದೂ ಸಮಾಜ ಒಡೆಯುವುದೇ ಕಾಂಗ್ರೆಸ್‌ ಅಜೆಂಡ: ಕೆ.ಎಸ್.ಈಶ್ವರಪ್ಪ
ಹಿಂದೂ ಸಮಾಜ ಒಡೆಯುವುದೇ ಕಾಂಗ್ರೆಸ್‌ ಸರ್ಕಾರದ ಮುಖ್ಯ ಅಜೆಂಡವಾಗಿದ್ದು, ಜಾತಿ ಜನಗಣತಿ ಹೆಸರಿನಲ್ಲಿ ಹಿಂದೂ ಸಮಾಜಕ್ಕೆ ಅನ್ಯಾಯ ಮಾಡುತ್ತಿದೆ. ಜಾತಿ ಜನಗಣತಿಯ ವಿವಾದದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರ ಕಳೆದುಕೊಳ್ಳಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.
  • < previous
  • 1
  • ...
  • 1156
  • 1157
  • 1158
  • 1159
  • 1160
  • 1161
  • 1162
  • 1163
  • 1164
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved