ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ಮತ್ತು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಗಳನ್ನು ಸರಳವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ವಿಜಯಕುಮಾರ ಹೇಳಿದರು.
ಹಾಸನದ ಡಿ.ಎ.ಆರ್. ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಪೊಲೀಸ್ ನಿರೀಕ್ಷಕರಾದ ಕೆ. ಪ್ರಭಾಕರ್ ಅವರನ್ನು ಸನ್ಮಾನಿಸಿ ಗೌರವಿಸಿದರು.
ಹಿರಿಯ ಮತದಾರರಿಗೆ ತಮ್ಮ ಮನೆಯಿಂದಲೇ ಮತದಾನ ಮಾಡಬಹುದಾಗಿದೆ. ಇಲ್ಲವೇ ಮತದಾನ ಕೇಂದ್ರಕ್ಕೆ ಬಂದು ಮತದಾನ ಮಾಡಬಹುದಾಗಿದೆ. ಚುನಾವಣೆಯಲ್ಲಿ ಯಾವುದೇ ಅಕ್ರಮ ಚಟುವಟಿಕೆ ಮತ್ತು ಮತದಾರರಿಗೆ ಯಾವುದೇ ಅಮಿಷವೊಡ್ಡುವಂತಹ ವಿಡಿಯೋಗಳಿದ್ದರೆ ಅವುಗಳನ್ನು ಸಿ ವ್ಹಿಜಿಲ್ ಮೂಲಕ ದೂರು ಸಲ್ಲಿಸಬಹುದಾಗಿದೆ
ಹೊಸ ಹೊಸ ಆವಿಷ್ಕಾರಗಳು ಹುಟ್ಟಿಕೊಳ್ಳುತ್ತಿದ್ದು, ತಾಂತ್ರಿಕ ವಿದ್ಯಾರ್ಥಿಗಳಾದ ನೀವು ನವನವೀನ ತಾಂತ್ರಿಕತೆಯ ಅರಿವು, ಜ್ಞಾನವನ್ನು ಪಡೆದುಕೊಂಡು ದೇಶದ ಸರ್ವತೋಮುಖ ಪ್ರಗತಿಗೆ ಪೂರಕವಾದ ಸಂಶೋಧನೆಗಳನ್ನು ಮಾಡುವತ್ತ ಕಾರ್ಯೋನ್ಮುಖರಾಗಬೇಕೆಂದು ಡಾ. ಹೆಚ್.ಪಿ ಪಾಟೀಲರು ತಿಳಿಸಿದರು.