ಮಾಜಿ ಸಿಎಂ ಎಚ್ಡಿಕೆ ಗೆದ್ರೆ ‘ಕಾವೇರಿ ನೀರಿನ’ ಸಮಸ್ಯೆಗೆ ಶಾಶ್ವತ ಪರಿಹಾರಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಗೆದ್ದು ಕೇಂದ್ರ ಸಚಿವರಾಗುವುದು ಖಚಿತ. ನಾನು ಸೇರಿದಂತೆ ಬೇರೆ ಯಾರೇ ಅಭ್ಯರ್ಥಿಗಳಾಗಿ ಗೆದ್ದರೂ ಸಂಸದರಾಗಿ ಮಾತ್ರ ಕೆಲಸ ಮಾಡಬೇಕಾಗುತ್ತಿತ್ತು. ಆದರೆ, ಎಚ್.ಡಿ. ಕುಮಾರಸ್ವಾಮಿ ಅವರು ಗೆದ್ದರೆ ಕೇಂದ್ರದಲ್ಲಿ ಸಚಿವರಾಗಿ ಕಾವೇರಿ ನೀರಿನ ಸಮಸ್ಯೆ, ಮೇಕದಾಟು ಯೋಜನೆಗಳ ಪರಿಹಾರ ಪೂರಕವಾಗಿ ಕೆಲಸ ಮಾಡಲಿದ್ದಾರೆ.