ಹರಪನಹಳ್ಳಿಯಲ್ಲಿ 1479 ಪ್ರಕರಣಗಳು ಇತ್ಯರ್ಥತಾಲೂಕು ಸೇವೆಗಳ ಪ್ರಾಧಿಕಾರದ ವತಿಯಿಂದ ಇಲ್ಲಿಯ ನ್ಯಾಯಾಲಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಕಿರಿಯ ಮತ್ತು ಹಿರಿಯ ಶ್ರೇಣಿಯ ನ್ಯಾಯಾಲಯಗಳಿಂದ ಒಟ್ಟು 1671 ಪ್ರಕರಣಗಳನ್ನು ಕೈಗೆತ್ತಿಕೊಂಡು, ಅದರಲ್ಲಿ 1479 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.