ಸ್ವಯಂ ಪ್ರೇರಿತ ರಕ್ತದಾನ ಹೆಚ್ಚಾಗಲಿ: ಸತ್ಯಣ್ಣಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವುದು ದೇಶ ಸೇವೆಗೆ ಸಮಾನ ಎಂದು ಜಿಲ್ಲಾ ರಕ್ತನಿಧಿ ಘಟಕದ ಹಿರಿಯ ಅಧಿಕಾರಿ ಸತ್ಯಣ್ಣ ತಿಳಿಸಿದರು. ಪತಂಜಲಿ ಯೋಗ ಕೇಂದ್ರದಲ್ಲಿ ಜೆಎಸ್‌ಬಿ ಪ್ರತಿಷ್ಠಾನದ ವತಿಯಿಂದ, ಶ್ರೀ ಶಿವಕುಮಾರ ಸ್ವಾಮಿಗಳು 117ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ''ರಕ್ತದಾನ ಶಿಬಿರ'' ಉದ್ಘಾಟಿಸಿ ಮಾತನಾಡಿ, ಯುವ ಜನಾಂಗ ವರ್ಷಕ್ಕೆ 3-4 ಬಾರಿ ರಕ್ತದಾನ ಮಾಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಬಹುದು. ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳು ಹೆಚ್ಚಾಗಿ ನಡೆಯಬೇಕು ಎಂದರು.