ಸಿದ್ದಗಂಗಾ ಶ್ರೀಗಳ 117ನೇ ಜನ್ಮದಿನಾಚರಣೆ ಸಂಭ್ರಮನಾಡಿನ ಭಕ್ತಾದಿಗಳ ಮನ-ಮನೆಗಳ ದೈವೀ ಪ್ರಭೆಯಾಗಿದ್ದ ಲಿಂ.ಡಾ.ಶಿವಕುಮಾರ ಸ್ವಾಮೀಜಿಯವರ 117ನೇ ಜನ್ಮಜಯಂತಿ ಅಂಗವಾಗಿ ಅವರು ಐಕ್ಯರಾಗಿರುವ ಶಿವಯೋಗಿ ಮಂದಿರದ ಗದ್ದುಗೆಯಲ್ಲಿ ಸೋಮವಾರ ಮುಂಜಾನೆಯಿಂದಲೇ ಧಾರ್ಮಿಕ ವಿಧಿ-ವಿಧಾನಗಳು, ಅಭಿಷೇಕ, ಅಷ್ಟೋತ್ತರ, ಮಹಾಮಂಗಳಾರತಿ, ಭಜನಾ ಮಂತ್ರ ಘೋಷಗಳು ಮೊಳಗಿದವು.