ಅಕ್ರಮ ಪಾಕ್ ಪ್ರಜೆಗಳ ಗಡಿಪಾರಿಗೆ ಬಿಜೆಪಿ ಒತ್ತಾಯಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳನ್ನು ಈ ಕೂಡಲೇ ಅವರ ದೇಶಕ್ಕೆ ಗಡಿಪಾರು ಮಾಡಬೇಕು. ವಿಜಯನಗರ ಜಿಲ್ಲೆಯಲ್ಲಿ ಅಕ್ರಮವಾಗಿ ಪಾಕ್ ಪ್ರಜೆಗಳು ನೆಲೆಸಿದ್ದರೆ, ಅವರನ್ನು ಹುಡುಕಿ ಪಾಕಿಸ್ತಾನಕ್ಕೆ ಕಳುಹಿಸಬೇಕು ಎಂದು ಒತ್ತಾಯಿಸಿ ವಿಜಯನಗರ ಜಿಲ್ಲಾ ಬಿಜೆಪಿ ವತಿಯಿಂದ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.