ಕೆ.ಆರ್.ಪೇಟೆ ತಾಲೂಕಿನಲ್ಲಿ ಇನ್ನೂ ನಿಲ್ಲದ ಅಕ್ರಮ ಮರಳು ದಂಧೆ..!ಅಕ್ರಮ ಮರಳು ಗಣಿಗಾರಿಕೆ ತಡೆದು ಪ್ರಾಕೃತಿಕ ಸಂಪತ್ತನ್ನು ರಕ್ಷಿಸಬೇಕಾದ ಅಧಿಕಾರಿಗಳು ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿದ್ದಾರೆ. ಕೆ.ಆರ್.ಪೇಟೆ ತಾಲೂಕಿನ ಹಲವು ಕಡೆಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವುದು ಪೊಲಿಸರಿಗೆ ತಿಳಿದಿದೆ. ಆದರೆ, ಮಾಸಿಕ ಇಂತಿಷ್ಟು ಹಣ ಪಡೆದು ಸುಮ್ಮನಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿವೆ.