ದಾಖಲೆ ಮತ ಪಡೆದಿದ್ದ ಕಾಂಗ್ರೆಸ್‌ನ ಬಿದರಿಬಾಗಲಕೋಟೆ: ಹಲವು ನಾಯಕರಿಗೆ ರಾಜಕೀಯ ಪುನರ್ ಜನ್ಮ ನೀಡಿದ ಬಾಗಲಕೋಟೆ ಲೋಕಸಭೆ ಕ್ಷೇತ್ರಕ್ಕೆ ತನ್ನದೇ ಆದ ವಿಶಿಷ್ಟ ಇತಿಹಾಸವಿದೆ. ಸ್ವತಂತ್ರ ಭಾರತದ ಬಳಿಕ ದೇಶದಲ್ಲಿ 1951ರಿಂದ ಸಾರ್ವತ್ರಿಕ ಚುನಾವಣೆ ಆರಂಭಗೊಂಡಿತು. ಆ ವರ್ಷದ ಕೊನೆಗೆ ನಡೆದ ಚುನಾವಣೆಯಲ್ಲಿ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದವರು ರಾಮಣ್ಣ ಬಿದರಿ. ಬಳಿಕ ನಡೆದ 1957ರ ಚುನಾವಣೆಯಲ್ಲೂ ಕಾಂಗ್ರೆಸ್‌ನಿಂದ 2ನೇ ಬಾರಿ ಅವರು ಗೆದ್ದಿದ್ದರು.