ಗೆಲ್ಲಿಸಿದರೆ ನಿಮ್ಮ ಧ್ವನಿಯಾಗಿ ಕೆಲಸ: ಡಾ.ಪ್ರಭಾಲೋಕಸಭಾ ಚುನಾವಣೆಯಲ್ಲಿ ಮತದಾರರೆಲ್ಲ ನನಗೆ ಮತ ಹಾಕಿ ಗೆಲ್ಲಿಸಿ, ನಿಮ್ಮ ಧ್ವನಿಯಾಗಿ ಕೆಲಸ ಮಾಡುವೆ. ನಮ್ಮ ಮನೆ. ಮನಸ್ಸಿನ ಬಾಗಿಲು ಯಾವಾಗಲೂ ತೆಗೆದಿರುತ್ತೆ. ಮಾವ ಶಾಮನೂರು ಶಿವಶಂಕರಪ್ಪ ಹಾಗೂ ಪತಿ ಎಸ್.ಎಸ್. ಮಲ್ಲಿಕಾರ್ಜುನ ಅವರಿಂದ ನಾನು ಸಾಕಷ್ಟು ಸಮಾಜ ಸೇವೆ ಕಲಿತಿದ್ದೇನೆ ಎಂದು ಹೇಳಿದರು. ದೇಶದಲ್ಲಿ ಬಿಜೆಪಿ ಸರ್ವಾಧಿಕಾರಿಯಾಗಿ ಆಡಳಿತ ನಡೆಸುತ್ತಲಿದೆ, ಬರ ಅನುದಾನ ನಮ್ಮ ರಾಜ್ಯಕ್ಕೆ ನೀಡಿಲ್ಲ. ನನಗೆ ಮತ ಹಾಕಿ ಗೆಲ್ಲಿಸಿದರೆ ತ್ರಿಬಲ್ ಎಂಜಿನ್ ಸರ್ಕಾರವಾಗುತ್ತದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಮನವಿ ಮಾಡಿದ್ದಾರೆ.