ಸಚಿವ ಖರ್ಗೆಗೆ ಜೀವ ಬೆದರಿಕೆ ಪತ್ರ: ಆರೋಪಿಗಳ ಸೆರೆಗೆ ಸಾಗರ್ ಆಗ್ರಹ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಗೂ ಜಾತಿನಿಂದನೆ ಮಾಡಿದ ಪತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಡಾ. ಡಿ.ಜಿ. ಸಾಗರ್ ಅವರು ಒತ್ತಾಯಿಸಿದರು.