ಕೊಳವೆ ಬಾವಿಗಳಿಂದ ‘ಸಾಲದ ಕೂಪ’ಕ್ಕೆ ಸಿಲುಕುತ್ತಿರುವ ‘ಅನ್ನದಾತರು’..!ಕಳೆದ ವರ್ಷ ಮಳೆ ಅಭಾವ, ನೀರಿನ ಕೊರತೆ, ರಣಬಿಸಿಲಿನ ಪರಿಣಾಮ ರೈತರ ಜಮೀನುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೊಳವೆಬಾವಿಗಳಲ್ಲಿ ನೀರು ಸಂಪೂರ್ಣ ಬತ್ತಿಹೋಗಿದೆ. ಬೋರ್‌ವೆಲ್‌ಗಳಲ್ಲಿ ನೀರು ಸ್ಥಗಿತಗೊಂಡಿರುವುದರಿಂದ ಬೆಳೆಗಳನ್ನು ಉಳಿಸಿಕೊಳ್ಳುವುದಕ್ಕೆ ರೈತರು ಹೊಸ ಬೋರ್‌ವೆಲ್‌ಗಳನ್ನು ನಿರ್ಮಿಸುತ್ತಿದ್ದಾರೆ. ದುರದೃಷ್ಟವೋ ಏನೋ ಬಹುತೇಕ ಹೊಸ ಕೊಳವೆ ಬಾವಿಗಳಲ್ಲಿ ನೀರು ಬರುತ್ತಲೇ ಇಲ್ಲ. ಲಕ್ಷಗಟ್ಟಲೆ ಹಣ ವ್ಯಯಿಸಿ ಕೊರೆಸಿದ ಬೋರ್‌ವೆಲ್‌ಗಳಲ್ಲಿ ನೀರು ಬಾರದಿರುವುದರಿಂದ ರೈತರು ತೀವ್ರ ಹತಾಶರಾಗಿದ್ದಾರೆ.