೨೮ ಕ್ಷೇತ್ರದಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ-ಬೊಮ್ಮಾಯಿ ವಿಶ್ವಾಸರಾಜ್ಯದ ಇತಿಹಾಸ ಅವಲೋಕಿಸಿದಾಗ ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಯ ವ್ಯತ್ಯಾಸ ಪ್ರಬುದ್ಧ ಮತದಾರರಿಗೆ ಗೊತ್ತಿದೆ. ಈ ಬಾರಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ೨೮ ಸ್ಥಾನಗಳಲ್ಲೂ ನಾವು ಗೆಲುವು ಸಾಧಿಸುತ್ತೇವೆ ಎಂದು ಮಾಜಿ ಸಿಎಂ, ಹಾವೇರಿ ಲೋಕಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.