ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಸಿಗುತ್ತಿಲ್ಲ: ಲೇಖಕಿ ಡಾ.ಮೀನಾಕ್ಷಿ ಬಾಳಿ ಆರೋಪಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಲ್ಲಿ ಶೇ.33ರಷ್ಟು ಮೀಸಲಾತಿ ನೀಡಿದ್ದರೂ ಶಾಸನ ಸಭೆಗಳಲ್ಲಿ ನಿರ್ಣಾಯಕವಾಗಿರುವ ರಾಜಕೀಯ ಮೀಸಲಾತಿಯನ್ನು ಕೊಡುತ್ತಿಲ್ಲ ಎಂದು ಲೇಖಕಿ ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ಡಾ. ಮೀನಾಕ್ಷಿ ಬಾಳಿ ಆರೋಪಿಸಿದ್ದಾರೆ.