19 ಚಿನ್ನದ ಪದಕ ಗಳಿಸಿದ ಸಾಧಕಿ ವಿ.ತೇಜಸ್ವಿನಿಗೆ ಸನ್ಮಾನತೇಜಸ್ವಿನಿ ಸಾಧನೆಯನ್ನು ಸಮಾರಂಭದಲ್ಲಿ ಭಾಗವಹಿಸಿದ್ದ ಗಣ್ಯರು ಮುಕ್ತಕಂಠದಿಂದ ಪ್ರಶಂಸಿಸಿ ಮಾತನಾಡಿದರು. ಶಾಲೆಯ ಹಳೆಯ ವಿದ್ಯಾರ್ಥಿ ಸಿಂಗಪೂರ್ ಶ್ರೀನಿವಾಸ್ ಮಾತನಾಡಿ, ಶೈಕ್ಷಣಿಕವಾಗಿ ಕನ್ನಡ ಭಾಷೆಯಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿ ಮಹತ್ವದ ಸಾಧನೆ ಮಾಡಿರುವುದು ನಾವೆಲ್ಲರೂ ಹೆಮ್ಮೆಪಡುವ ವಿಚಾರ, ತೇಜಸ್ವಿನಿಸಾಧನೆ ಇತರೆ ವಿದ್ಯಾರ್ಥಿಗಳಿಗೆ ಸ್ಪೂರ್ತಿ ಪ್ರೇರಣೆ ನೀಡಿದೆ ಎಂದರು.