ನಾಳೆ ಮಡಿಕೇರಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿಯಾದ ಪರಿಣಾಮ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಲು ವರಿಷ್ಠರು ಸೂಚನೆ ನೀಡಿದ್ದಾರೆ. ಅಂತೆಯೇ, ಅಭ್ಯರ್ಥಿಯ ಗೆಲುವಿಗಾಗಿ ಕಾರ್ಯಕರ್ತರು ಸಜ್ಜಾಗಿದ್ದೇವೆ. ಈ ಹಿಂದೆ ಬಿಜೆಪಿ ಮತ್ತು ಜೆಡಿಎಸ್‌ಗೆ ನೇರ ಹಣಾಹಣಿ ನಡೆಯುತ್ತಿತ್ತು. ಆದರೆ ಈ ಬಾರಿ ವರಿಷ್ಠರ ಸೂಚನೆ ಮೇರೆಗೆ ಅಭ್ಯರ್ಥಿ ಯದುವೀರ್ ಅವರ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಸಿ.ಎಲ್.ವಿಶ್ವ ತಿಳಿಸಿದ್ದಾರೆ.