ಎಲ್ಲರೂ ಆತ್ಮಸಾಕ್ಷಿಯಿಂದ ಮತ ಚಲಾಯಿಸಿ: ಜಿಲ್ಲಾಧಿಕಾರಿ ಸತ್ಯಭಾಮಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಆತ್ಮಸಾಕ್ಷಿಗೆ ಅನುಗುಣವಾಗಿ ಎಲ್ಲರೂ ಮತ ಚಲಾಯಿಸುವ ಮೂಲಕ ಶೇಕಡ ನೂರರಷ್ಟು ಮತ ಪ್ರಮಾಣ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ಹೇಳಿದರು. ಹಾಸನದಲ್ಲಿ ಲೋಕಸಭಾ ಚುನಾವಣೆ ೨೦೨೪ರ ಅಂಗವಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಬುಧವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಜಾಥಾದಲ್ಲಿ ಹೇಳಿದರು.