ಗಡಿಗ್ರಾಮಗಳಿಂದ ‘ಲೋಕ’ಚುನಾವಣೆ ಬಹಿಷ್ಕರಿಸುವ ಬೆದರಿಕೆತಮಿಳುನಾಡು ಗಡಿಯಲ್ಲಿರುವ ಕದರಿನತ್ತ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು ಹಲವು ದಶಕಗಳಿಂದ ಕಾಡಾನೆಗಳ ಜೊತೆ ಸಂಘರ್ಷ ನಡೆಸಿಕೊಂಡು ಬರುತ್ತಿದ್ದಾರೆ. ಆನೆಗಳ ಹಾವಳಿಯಿಂದ ರೈತರು ಬೆಳೆದ ಬೆಳೆಗಳು ಹಾನಿಯಾಗುತ್ತಿವೆ. ಈ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಹಾಗೂ ರೈತ ಸಂಘದ ನೇತೃತ್ವದಲ್ಲಿ ಹಲವಾರು ಬಾರಿ ಹೋರಾಟಗಳನ್ನು ನಡೆಸಿ, ಜನಪ್ರತಿನಿಧಿಗಳಿಗೆ, ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿಗಳನ್ನು ಸಲ್ಲಿಸಿದ್ದರೂ ಸಹ ಸಮಸ್ಯೆ ನೀಗಿಲ್ಲ ಹಾಗೂ ಕದರಿನತ್ತ ಗ್ರಾಮ ಸೌಲಭ್ಯಗಳಿಂದ ವಂಚನೆಗೊಳಗಾಗಿದೆ.