ಡಾ.ಪ್ರಭಾ ಗೆಲುವಿನ ಬಗ್ಗೆ ಅನುಮಾನ ಬೇಡ: ಸಚಿವ ಮಲ್ಲಿಕಾರ್ಜುನನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಕಾಂಗ್ರೆಸ್ ಪಕ್ಷವು ದಾವಣಗೆರೆ ಲೋಕಸಭಾ ಕ್ಷೇತ್ರ ಗೆಲ್ಲುವುದರಲ್ಲಿ ಯಾವುದೇ ಅನುಮಾನವೂ ಬೇಡ. ಈ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಯಾವ ರೀತಿ ಹೋರಾಟ ಮಾಡಬೇಕೆಂಬ ಬಗ್ಗೆ ನಾಯಕರೆಲ್ಲಾ ಚರ್ಚಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.