ವಿಜೃಂಭಣೆಯ ಗುಂಜಾನರಸಿಂಹ ಸ್ವಾಮಿ ದಿವ್ಯ ಬ್ರಹ್ಮರಥೋತ್ಸವರಥೋತ್ಸವಕ್ಕೆ ಚಾಲನೆ ನೀಡುವ ವೇಳೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜ್ ಹಾಗೂ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಸುನಿಲ್ ಬೋಸ್ ಮುಖಾಮುಖಿಭೇಟಿಯಾದರು. ಆದರೆ ಒಬ್ಬರ ಮುಖ ಒಬ್ಬರು ನೋಡಲಿಲ್ಲ, ಮಾತನಾಡಲಿಲ್ಲ. ಬಿಜೆಪಿ ಕಾರ್ಯಕರ್ತರೊಂದಿಗೆ ಬಾಲರಾಜ್, ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸುನಿಲ್ ಬೋಸ್ ಪೋಟೋಗೆ ಪೋಸ್ ಕೊಟ್ಟು ರಥಕ್ಕೆ ಪೂಜೆ ಸಲ್ಲಿಸಿ ಅಲ್ಲಿಂದ ತೆರಳಿದರು. ಚುನಾವಣೆ ಕಣ ಇನ್ನೂ ರಂಗೇರಿಲ್ಲವಾದರೂ ಇಬ್ಬರ ನಡೆ ತೀವ್ರ ಕುತೂಹಲ ಕೆರಳಿಸಿತು.