ಅದ್ಧೂರಿಯಾಗಿ ನಡೆದ ಶ್ರೀಸೌಮ್ಯಕೇಶವ ಸ್ವಾಮಿ ಬ್ರಹ್ಮರಥೋತ್ಸವಸೋಮವಾರ ನಡೆದ ಬ್ರಹ್ಮರಥೋತ್ಸವಕ್ಕೆ ನೆರೆಯ ತಮಿಳುನಾಡು, ಆಂಧ್ರಪ್ರದೇಶ ಮತ್ತು ಕೇರಳ ಸೇರಿದಂತೆ ನಾಡಿನ ವಿವಿಧೆಡೆಯಿಂದ ಅಪಾರ ಸಂಖ್ಯೆ ಭಕ್ತರು ಪಾಲ್ಗೊಂಡು ಶ್ರೀಸೌಮ್ಯಕೇಶವನಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಧ್ಯಾಹ್ನ ೧.೩೦ರ ವೇಳೆಗೆ ಮಂಗಳವಾದ್ಯದೊಂದಿಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ದೇವಾಲಯದ ಆವರಣದಲ್ಲಿ ಮೆರವಣಿಗೆ ನಡೆಸಿದ ರಥೋತ್ಸವಕ್ಕೆ ಭಕ್ತಾದಿಗಳು ತಮ್ಮ ಭಕ್ತಿ ನಮನ ಸಲ್ಲಿಸಿದರು. ನಂತರ ನಡೆದ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿಯೂ ಸಹ ಸಾವಿರಾರು ಭಕ್ತರು ಪ್ರಸಾದ ಸ್ವೀಕರಿಸಿದರು.