ವಿಜೃಂಭಣೆಯಿಂದ ಜರುಗಿದ ಶ್ರೀಗಂಗಾಧರೇಶ್ವರಸ್ವಾಮಿ ರಥೋತ್ಸವರಥೋತ್ಸವದ ಅಂಗವಾಗಿ ಭಾನುವಾರ ಇಡೀ ರಾತ್ರಿ ಶ್ರೀಕ್ಷೇತ್ರದಲ್ಲಿ ವಿವಿಧ ಬಗೆಯ ಪೂಜಾ ಕೈಂಕರ್ಯ, ಪೌರಾಣಿಕ ನಾಟಕ ಪ್ರದರ್ಶನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶ್ರೀಕ್ಷೇತ್ರದ ಅಧಿದೇವತೆ ಗಂಗಾಧರೇಶ್ವರ ಸ್ವಾಮಿಯನ್ನು ಅಲಂಕೃತಗೊಂಡಿದ್ದ ರಥದಲ್ಲಿ ಕೂರಿಸಲಾಗಿತ್ತು. ರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ನೆರೆದಿದ್ದ ಭಕ್ತರು ರಥವನ್ನು ಎಳೆಯುವ ಜೊತೆಗೆ ಹಣ್ಣು, ಜವನ ಎಸೆದು ಭಕ್ತಿ ಭಾವ ಮೆರೆದರು.