ರಕ್ತಹೀನತೆ ಮುಕ್ತ ಕರ್ನಾಟಕಕ್ಕೆ ಹೊಸ ಯೋಜನೆರಾಜ್ಯ ಬಜೆಟ್ನಲ್ಲಿ ಘೋಷಿಸಲಾಗಿದ್ದ ರಕ್ತಹೀನತೆ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆ ಅನುಷ್ಠಾನಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಯೋಜನಾ ವೆಚ್ಚವನ್ನು 185.74 ಕೋಟಿ ರು.ಗೆ ನಿಗದಿ ಮಾಡಲಾಗಿದೆ. ಈ ಯೋಜನೆ ಅನುಷ್ಠಾನದ ಮೂಲಕ ರಾಜ್ಯವನ್ನು ಅಪೌಷ್ಟಿಕ ಮುಕ್ತ ರಾಜ್ಯವಾಗಿಸಲಾಗುವುದು ಎಂದು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.