ಕನಸಿನ ಕೂಸು ವಾತ್ಸಲ್ಯ ಮನೆ ಹಸ್ತಾಂತರಇಂಡಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯಡಿ ಹೇಮಾವತಿ ಅಮ್ಮನವರ ಕನಸಿನ ಕೂಸು ವಾತ್ಸಲ್ಯ ಮನೆಯನ್ನು ತಾಲೂಕಿನ ಮಿರಗಿ ಗ್ರಾಮದಲ್ಲಿ ಶಕುಂತಲಾ ಭೀಮರಾಯ ಬಡಿಗೇರ ಅವರಿಗೆ ವಿತರಿಸಲಾಯಿತು. ಈ ವೇಳೆ ಮಾತನಾಡಿದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ರೈ, ಗ್ರಾಮೀಣ ಭಾಗದಲ್ಲಿ ವಾಸಿಸುವ ಅತ್ಯಂತ ಕಡು ಬಡವರನ್ನು ಗುರುತಿಸಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ವಾತ್ಸಲ್ಯ ಮನೆಗಳನ್ನು ನಿರ್ಮಿಸಿ ಸೂರು ಕಲ್ಪಿಸುತ್ತಿದ್ದಾರೆ.