ವೀಣಾ ಬಿಟ್ಟು ಸಂಯುಕ್ತಾ ಹೆಸರು ಯಾಕೆ?ಬಾಗಲಕೋಟೆ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಅವಿಭಜಿತ ವಿಜಯಪುರ ಜಿಲ್ಲೆಯ ಮಹಿಳೆಯನ್ನು ಘೋಷಿಸುವ ಮೂಲಕ ಚುನಾವಣಾ ತಂತ್ರ ಬದಲಿಸಲು ಹೊರಟಂತೆ ಕಾಣುತ್ತಿದೆ. ಆದರೆ, ಸ್ಥಳೀಯ ಆಕಾಂಕ್ಷಿಗಳನ್ನು ಬದಿಗಿಟ್ಟು, ಮುಖಂಡರ ವಿಶ್ವಾಸ ಪಡೆಯದೇ ಅಭ್ಯರ್ಥಿ ಆಯ್ಕೆ ಮಾಡಿರುವುದು ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.