ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ಐದು ನಗರಪಾಲಿಕೆಗಳನ್ನು ರಚಿಸಿ ಗಡಿ ಗುರುತಿಸಿರುವ ರಾಜ್ಯ ಸರ್ಕಾರ, ಡಿಸೆಂಬರ್‌ನಲ್ಲಿ ಚುನಾವಣೆ ನಡೆಸಲು ಸಿದ್ಧವಿರುವುದಾಗಿ ಸುಪ್ರೀಂಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ.
ನಗರದಲ್ಲಿ ಹೆಚ್ಚುತ್ತಿರುವ ಡೆಂಘೀ ಪ್ರಕರಣ ನಿಯಂತ್ರಣಕ್ಕೆ ಮುಂದಾಗಿರುವ ಬಿಬಿಎಂಪಿ, ಲಾರ್ವಾ ಉತ್ಪತ್ತಿ ಸ್ಥಳಗಳನ್ನು ಪತ್ತೆ ಮಾಡಿ ನಾಶಪಡಿಸುವುದು ಮತ್ತು ಎಲ್ಲೆಡೆ ಔಷಧ ಸಿಂಪಡಣೆ ಮಾಡಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದ 3.75 ಲಕ್ಷ ಸುಸ್ತಿದಾರರಿಗೆ ನೋಟಿಸ್ ಜಾರಿ ಮಾಡಿ, ಬಾಕಿ ತೆರಿಗೆ ವಸೂಲಿ ಮಾಡಲು ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚಿಸಿದರು.
ನಮ್ಮ ಸಂಸ್ಕೃತಿ, ಪರಂಪರೆ, ಆದರ್ಶಗಳ ಬಗ್ಗೆ ಮಾತನಾಡಿದ್ದೇವೆ. ಇದರ ಹೊರತು, ಅನ್ಯ, ಬೇರೆ ಯಾವುದೇ ಜಾತಿಗಳ ಕುರಿತಂತೆ ಯಾವುದೇ ಹೇಳಿಕೆಯನ್ನೂ ನೀಡಿಲ್ಲ
ಜಾತಿ ಮಠಗಳಿಂದ ಸಮಾಜ ಕಲುಷಿತಗೊಂಡಿದೆ ಎಂದು ಹೇಳಿಕೆ ನೀಡಿದ ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟ ಕಿಡಿ ಕಾರಿದೆ.
ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದ್ದ ನಟಿ, ಮಾಜಿ ಸಂಸದೆ ರಮ್ಯಾ ಮತ್ತು ದರ್ಶನ್ ಅಭಿಮಾನಗಳ ನಡುವಿನ ಜಗಳ ಇದೀಗ ಠಾಣೆ ಮೆಟ್ಟಿಲೇರಿದೆ.
ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ - ಅಮಾನತುಗೊಳಿಸಿದ್ದ ಐವರು ಪೊಲೀಸ್ ಅಧಿಕಾರಿಗಳ ಪೈಕಿ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿ ನಾಲ್ವರ ಅಮಾನತು ಆದೇಶವನ್ನು ರಾಜ್ಯಸರ್ಕಾರ ಹಿಂಪಡೆದಿದೆ.
ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಆಪ್ತರು ಎನ್ನಲಾದ ಇಬ್ಬರು ಎಲೆಕ್ಟ್ರಿಕ್ ಗುತ್ತಿಗೆದಾರರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ಸೋಮವಾರ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.