ಬಿಪಿಎಲ್ ಕಾರ್ಡು ಪಡೆಯಲು ವಾರ್ಷಿಕ ಆದಾಯ ಮಿತಿ 1.20 ಲಕ್ಷ ರು.ಗಿಂತ ಕಡಿಮೆ ಇರಬೇಕೆಂಬ ಮಾನದಂಡ ನಿಗದಿಮಾಡಿರುವುದು ಕೇಂದ್ರ ಸರ್ಕಾರ, ನಾವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ ಪೊಲೀಸ್ ಪೇದೆ ಹುದ್ದೆ ನೇಮಕಾತಿ ವಯೋಮಿತಿ ಸಡಿಸಲು ಮನವಿ ಮಾಡಲಾಗಿದ್ದು, ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ‘ಕನ್ನಡ ಸಂಘ ಬಹರೈನ್’ಗೆ ಒಂದು ಕೋಟಿ ರೂ.ಗಳ ಅನುದಾನ ನೀಡಲು ಅನುಮೋದನೆ ನೀಡಿದ್ದಾರೆ.
ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯಾ ಮಾವ ವಿಠಲಗೌಡ ಆಪ್ತ ಪ್ರದೀಪ್ ಅವರನ್ನು ಎಸ್ಐಟಿ ಪೊಲೀಸರು ಬೆಳ್ತಂಗಡಿ ಕೋರ್ಟ್‌ಗೆ ಹಾಜರುಪಡಿಸಿ ತಲೆಬುರುಡೆ ಪತ್ತೆ ಪ್ರಕರಣದಲ್ಲಿ ಸಾಕ್ಷ್ಯವನ್ನಾಗಿ ಪರಿಗಣಿಸಲು ಹೇಳಿಕೆ ಪಡೆಯಲಾಗಿದೆ.
ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶದ ವ್ಯಾಪ್ತಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ರಾಜ್ಯದ ಪ್ರಾದೇಶಿಕ ಸಾರಿಗೆ ಕಚೇರಿಗಳ ಕಾರ್ಯನಿರ್ವಹಣೆಗೆ ನೂತನ ವಾಹನ್ ತಂತ್ರಾಂಶ ಅಳವಡಿಸಿರುವ ಕಾರಣದಿಂದ ಇನ್ನು ಮುಂದೆ ವಾಹನಗಳ ಕ್ಲಿಯರೆನ್ಸ್ ಪ್ರಮಾಣಪತ್ರ ಮತ್ತು ನಿರಾಕ್ಷೇಪಣ ಪ್ರಮಾಣಪತ್ರ ಪಡೆಯಲು ಸೂಕ್ತ ಮಾಹಿತಿ ಒದಗಿಸುವುದು ಕಡ್ಡಾಯ ಎಂದು ಸಾರಿಗೆ ಇಲಾಖೆ ಸೂಚಿಸಿದೆ.
ಬೆಂಗಳೂರು ದಕ್ಷಿಣ ತಾಲೂಕು ಬೇಗೂರು ಹೋಬಳಿಯ ದೊಡ್ಡನಾಗಮಂಗಲ ಗ್ರಾಮದಲ್ಲಿನ ಕೆರೆಯ ಎರಡು ಎಕರೆ ಜಾಗ ಒತ್ತುವರಿ ಮಾಡಿಕೊಂಡು ರಚಿಸಿದ್ದ ಲೇಔಟ್‌ನಲ್ಲಿ ನಿರ್ಮಿಸಿದ್ದ ಸುಮಾರು 20 ಮನೆಗಳ ನೆಲಸಮ
ಮೆಟ್ರೋ ರೈಲು ಟಿಕೆಟ್ ದರವನ್ನು ಪ್ರತಿ ವರ್ಷ ಗರಿಷ್ಠ ಶೇ.5ರಷ್ಟು ಹೆಚ್ಚಳ ಮಾಡಲು ಮೆಟ್ರೋ ರೈಲು ಟಿಕೆಟ್ ದರ ನಿಗದಿ ಸಮಿತಿ (ಎಫ್‌ಎಫ್‌ಸಿ) ಬಿಎಂಆರ್‌ಸಿಎಲ್‌ಗೆ ಶಿಫಾರಸು ಮಾಡಿದೆ.
ನಗರದ ರಸ್ತೆಗಳು, ಕಾಲುವೆಗಳು ಹಾಗೂ ಬ್ಲಾಕ್ ಸ್ಪಾಟ್‌ಗಳಿಗೆ ಕಸ ಎಸೆದರೆ ಇನ್ನು ಮುಂದೆ 2 ಸಾವಿರ ರು. ದಂಡ ವಿಧಿಸಲಾಗುವುದು ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರೀಗೌಡ ತಿಳಿಸಿದರು.