ಗೀತಾಗೆ ಶಿವಮೊಗ್ಗದಲ್ಲಿ ಅದ್ಧೂರಿ ಸ್ವಾಗತಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಟಿಕೆಟ್ ಘೋಷಣೆ ಬಳಿಕ ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಅವರಿಗೆ ಬುಧವಾರ ಜಿಲ್ಲಾ ಕಾಂಗ್ರೆಸ್‌ನಿಂದ ಅದ್ಧೂರಿ ಸ್ವಾಗತ ಕೋರಲಾಯಿತು. ಭದ್ರಾವತಿ ತಾಲೂಕಿನ ಕಾರೇಹಳ್ಳಿಯಿಂದ ಭದ್ರಾವತಿವರೆಗೂ ಬೃಹತ್ ಮೆರವಣಿಗೆ ಮೂಲಕ ಆಗಮಿಸಿ ಭರ್ಜರಿ ಪ್ರಚಾರ ನಡೆಸಿದ ಗೀತಾ ಅವರಿಗೆ ಪತಿ, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬಿ.ಕೆ. ಸಂಗಮೇಶ್ವರ್, ಬೇಳೂರು ಗೋಪಾಲಕೃಷ್ಣ ಸೇರಿದಂತೆ ಸಾವಿರಾರು ಕಾರ್ಯಕರ್ತರು ಸಾಥ್ ನೀಡಿದರು.