ಎಚ್.ಡಿ.ಕುಮಾರಸ್ವಾಮಿ ಆರೋಗ್ಯ ವೃದ್ಧಿಗಾಗಿ ಆಂಜನೇಯ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಕೆಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಗ್ಯವಾಗಿರಲು, ಅವರ ಸೇವೆ ಹಲವು ವರ್ಷಗಳ ಕಾಲ ರಾಜ್ಯ ಮತ್ತು ರಾಷ್ಟ್ರ ರಾಜಕಾರಣಕ್ಕೆ ಸದ್ಬಳಕೆಯಾಗಲಿ ಎಂದು ಪ್ರಾರ್ಥಿಸಿ ಪೂಜೆ ಸಲ್ಲಿಸಲಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತಮ್ಮ ಅಧಿಕಾರದ ಅವಧಿಯಲ್ಲಿ 90 ಸಾವಿರ ಹೆಕ್ಟೆರ್ ನೀರಾವರಿ ಪ್ರದೇಶವನ್ನು 4 ಲಕ್ಷ ಹೆಕ್ಟೆರ್ ನೀರಾವರಿ ಪ್ರದೇಶವನ್ನಾಗಿ ಪರಿವರ್ತನೆ ಮಾಡಿದರು. ಇವರ ಪುತ್ರರಾದ ಎಚ್.ಡಿ.ಕುಮಾರಸ್ವಾಮಿ ಬಡವರು, ರೈತರ ಬಗ್ಗೆ ಕಾಳಜಿ ಹೊಂದಿ ರಾಜ್ಯದ ರೈತರ ಸಾಲಮನ್ನಾ ಮಾಡಿ ಸಾಧನೆ ಮಾಡಿದ್ದಾರೆ.