ನೀತಿ ಸಂಹಿತೆ ಪಾಲನೆ ಕಡ್ಡಾಯದೇಶದಲ್ಲಿ ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಗೊಂಡಿರುವ ಹಿನ್ನೆಯಲ್ಲಿ ಸದ್ಯ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೊಂಡಿದೆ. ಕಾರಣ ಎಲ್ಲ ರಾಜಕೀಯ ಪಕ್ಷಗಳು, ಆಯಾ ಪಕ್ಷಗಳ ಮುಖಂಡರು ಪದಾಧಿಕಾರಿಗಳು ನೀತಿ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಶಾಂತಿಯುತ ಚುನಾವಣೆಯಾಗುವಂತೆ ನೋಡಿಕೊಳ್ಳಬೇಕು ಎಂದು ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರ ತಾಲೂಕು ಚುನಾವಣಾ ಅಧಿಕಾರಿ, ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ರಾಜಶೇಖರ ವಿಲಿಯಮ್ಸ್ ತಿಳಿಸಿದರು.