ಹಾಸ್ಟೆಲ್‌ಗಳಿಗೆ ಸೌಲಭ್ಯ ಒದಗಿಸಿಕನ್ನಡಪ್ರಭ ವಾರ್ತೆ ಇಂಡಿ ಪಟ್ಟಣದ ಬಿಸಿಎಂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಸೇರಿದಂತೆ ವಸತಿ ನಿಲಯಗಳಿಗೆ ಮೂಲಭೂತ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟು ಟಿಪ್ಪು ಸುಲ್ತಾನ, ಬಸವೇಶ್ವರ, ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಸಾಗಿ ಮಿನಿ ವಿಧಾನಸೌಧಕ್ಕೆ ತೆರಳಿತು.