ಬಾಕ್ಸ್..ಕರಪತ್ರ, ಪೋಸ್ಟರ್, ಕಿರುಹೊತ್ತಿಗೆ ಮುದ್ರಿಸಲು ಅನುಮತಿ ಕಡ್ಡಾಯ: ಜಾನಕಿ ಕೆ.ಎಂಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಹಾಗೂ ಅಭ್ಯರ್ಥಿಗಳ ಪ್ರಚಾರದ ಕರಪತ್ರ, ಪೋಸ್ಟರ್ ಹಾಗೂ ಕಿರುಹೊತ್ತಿಗೆ ಇತ್ಯಾದಿಗಳನ್ನು ಮುದ್ರಿಸುವ ಪೂರ್ವದಲ್ಲಿ ಮುದ್ರಕರು ನಿಗದಿತ ನಮೂನೆ ಭರ್ತಿ ಮಾಡಿ ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ಹೇಳಿದರು.