ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಂಡರೆ ಕಠಿಣ ಕ್ರಮ: ಕೆ. ರಾಜುಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದಾಖಲೆಗಳಿಲ್ಲದೆ 50 ಸಾವಿರಕ್ಕಿಂತ ಅಧಿಕ ಮೊತ್ತವನ್ನು ವಶಪಡಿಸಿಕೊಳ್ಳಲಾಗುವುದು. ಹಾಗೆಯೇ ಸಂಶಯಾಸ್ಪದವಾಗಿ ಸಾಗಿಸಲ್ಪಡುವ ಉಡುಗೊರೆ, ವಸ್ತುಗಳು ಕಂಡು ಬಂದಲ್ಲಿ ಅವುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗುವುದು. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬೆಳುವಾಯಿ, ಮಾರೂರು ಮತ್ತು ಬಪ್ಪನಾಡುವಿನಲ್ಲಿ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ