ಮುಳುವಾದ ಮಲಪನಗುಡಿ ಗಣಿ;ಕರ್ನಾಟಕ - ಆಂಧ್ರದ ಗಡಿಯೇ ಬದಲು ತಮಗೆ ದೊರೆತ ಪರವಾನಗಿ ವ್ಯಾಪ್ತಿ ಮೀರಿ ಆಂಧ್ರ ಗಡಿ ಭಾಗದಲ್ಲಿ ಓಬಳಾಪುರಂ ಮೈನಿಂಗ್ ಕಂಪನಿ ಮೂಲಕ 10,760 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ಆರಂಭಿಸಿದರು ಹಾಗೂ ಅಕ್ರಮವಾಗಿ ಮಣ್ಣು ಸಾಗಿಸಿದರು. ಆಂಧ್ರಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿ ಪಡೆದು ಕರ್ನಾಟಕದಲ್ಲಿ ಗಣಿಗಾರಿಕೆ ಮಾಡಿದ ಆರೋಪ ಎದುರಿಸುತ್ತಿರುವ ಜನಾರ್ದನ ರೆಡ್ಡಿ, ನಾನು ಕರ್ನಾಟಕದ ಹಿಡಿ ಮಣ್ಣು ಮುಟ್ಟಿಲ್ಲ ಎಂದು ಸಮರ್ಥಿಸಿಕೊಂಡೇ ಬಂದಿದ್ದರು.