ಭ್ರೂಣಲಿಂಗ ಪತ್ತೆ: ವೈದ್ಯರಿಗೆ 3 ವರ್ಷ ಜೈಲು, ₹10 ಸಾವಿರ ದಂಡ 2ನೇ ಬಾರಿ ಅಪರಾಧಕ್ಕೆ 5 ವರ್ಷ ಜೈಲು, ₹50 ಸಾವಿರ ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ ನೀರಗುಡೆ ಹೇಳಿದರು. ಭ್ರೂಣಲಿಂಗ ಪತ್ತೆಗೆ ಸಂಬಂಧಿಸಿದ ಯಾವುದೇ ಜಾಹೀರಾತುಗಳನ್ನು ನೀಡುವವರಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರು. ದಂಡ ವಿಧಿಸಲಾಗುತ್ತದೆ.